
ಪಿಟಿಐ
ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ.
ನಡ್ಡಾ ಅವರ ನೇಮಕ ವಿಷಯವನ್ನು ಪಕ್ಷದ ಸಂಸದೀಯ ಮಂಡಳಿ ಸಭೆಯ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದರು.
ಬಿಜೆಪಿಯ ಅತ್ಯುನ್ನತ ನೀತಿ ನಿರ್ಧಾರ ತೆಗೆದುಕೊಳ್ಳುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ ಭಾಗಿಯಾಗಿದ್ದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.