ADVERTISEMENT

ಕೋವಿಡ್‌ ಲಸಿಕೆ ವಿಚಾರದಲ್ಲಿ ಮಮತಾ ಜನರ ಹಾದಿ ತಪ್ಪಿಸುತ್ತಿದ್ದಾರೆ: ಜೆ.ಪಿ.ನಡ್ಡಾ

ಪಿಟಿಐ
Published 26 ಏಪ್ರಿಲ್ 2021, 15:09 IST
Last Updated 26 ಏಪ್ರಿಲ್ 2021, 15:09 IST
ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ   

ಮಾಲ್ಡಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋವಿಡ್–19 ಲಸಿಕೆಯೂ ಸೇರಿದಂತೆ ಹಲವು ವಿಚಾರಗಳಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೂರಿದ್ದಾರೆ.

ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಎಂಟು ಹಂತಗಳ ಚುನಾವಣೆಯ ಪ್ರಚಾರ ಇಂದು (ಸೋಮವಾರ) ಕೊನೆಗೊಂಡಿದೆ. ಎಲ್ಲ ಹಂತಗಳ ಪ್ರಚಾರದಲ್ಲಿಯೂ ಮಮತಾ ಅವರು ಹೊರಗಿನವರು–ಒಳಗಿನವರು ಎಂಬ ಆರೋಪ, ಲಸಿಕೆ ಸೇರಿದಂತೆ ಅನೇಕ ವಿಚಾರಗಳಲ್ಲಿ ಜನರ ಹಾದಿ ತಪ್ಪಿಸಿದ್ದಾರೆ’ ಎಂದು ಹೇಳಿದ್ದಾರೆ.

ಬಿಜೆಪಿಯು ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ಸದಾ ಎತ್ತಿಹಿಡಿದಿದೆ ಎಂದೂ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಏಪ್ರಿಲ್ 29ರಂದು ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.