ADVERTISEMENT

ಜನರನ್ನು ಮುಖ್ಯವಾಹಿನಿಗೆ ಬರದಂತೆ ಮಮತಾ ಸರ್ಕಾರ ತಡೆದಿದೆ: ಜೆ.ಪಿ.ನಡ್ಡಾ ಆರೋಪ

ಏಜೆನ್ಸೀಸ್
Published 9 ಡಿಸೆಂಬರ್ 2020, 11:08 IST
Last Updated 9 ಡಿಸೆಂಬರ್ 2020, 11:08 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಜನರನ್ನು ಮುಖ್ಯವಾಹಿನಿಗೆ ಬರದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತಡೆದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿರುವ ಅವರು, 'ಕೌಟುಂಬಿಕ ಹಿಂಸೆ, ಮಾನವ ಕಳ್ಳಸಾಗಣೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ಪಶ್ಚಿಮ ಬಂಗಾಳದಲ್ಲಿ ಅಧಿಕವಾಗಿವೆ. ಆದರೆ, ಈ ಅಂಕಿ-ಸಂಖ್ಯೆಗಳನ್ನು ಅಪರಾಧ ಸಂಸ್ಥೆಗೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ಕೋವಿಡ್‌ಗೆ ಸಂಬಂಧಿಸಿದ ಅಂಕಿ-ಸಂಖ್ಯೆಗಳನ್ನೂ ಸಹ ಅವರು ನೀಡುತ್ತಿಲ್ಲ' ಎಂದು ಆರೋಪಿಸಿದ್ದಾರೆ.

ತಮ್ಮ ರಾಜಕೀಯ ಲಾಭಕ್ಕಾಗಿ ಪಶ್ಚಿಮ ಬಂಗಾಳದ ಜನರನ್ನು ಮುಖ್ಯವಾಹಿನಿಗೆ ಬರದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತಡೆದಿದೆ ಎಂದು ಜೆ.ಪಿ.ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.