ADVERTISEMENT

ಭಾರತದಲ್ಲಿ ಈಗ 23 ಏಮ್ಸ್‌ ಇವೆ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ

ಪಿಟಿಐ
Published 20 ಡಿಸೆಂಬರ್ 2025, 16:23 IST
Last Updated 20 ಡಿಸೆಂಬರ್ 2025, 16:23 IST
ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ   

ನವದೆಹಲಿ: ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಒದಗಿಸುವುದು ಮತ್ತು ವೈದ್ಯಕೀಯ ತರಬೇತಿ ವಿಸ್ತರಿಸುವ ಬದ್ಧತೆಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ತಿಳಿಸಿದ್ದಾರೆ.

ಲಕ್ನೋದಲ್ಲಿ ನಡೆದ ಕಿಂಗ್‌ ಜಾರ್ಜ್‌ ಅವರ ವೈದ್ಯಕೀಯ ಕಾಲೇಜಿನ (ಕೆಜಿಎಂಯು) 21ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ‘ದೇಶದಲ್ಲಿ ಇದೀಗ 23 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ (ಏಮ್ಸ್‌) ಕಾರ್ಯನಿರ್ವಹಿಸುತ್ತಿವೆ. ಕಳೆದ 11 ವರ್ಷದಲ್ಲಿ ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 819ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದರು.

ಜೊತೆಗೆ, ಪದವಿ ವೈದ್ಯಕೀಯ ಸೀಟುಗಳ ಸಂಖ್ಯೆ 51,000ದಿಂದ 1,19,000ಕ್ಕೆ ಮತ್ತು ಸ್ನಾತಕೋತ್ತರ ಸೀಟುಗಳ ಸಂಖ್ಯೆ 31,000ದಿಂದ 80,000ಕ್ಕೆ ಏರಿಕೆಯಾಗಿದೆ. ಪ್ರಧಾನಿ ಮೋದಿ ಅವರ ನಿರ್ದೇಶನದಂತೆ 2029ರವರೆಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ 75,000 ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು. ಈಗಾಗಲೇ ಒಂದು ವರ್ಷದಲ್ಲಿ 23,000ಕ್ಕೂ ಹೆಚ್ಚು ಸೀಟುಗಳನ್ನು ಸೇರಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಇಂದು ದೇಶದಲ್ಲಿ 1.82ಲಕ್ಷಕ್ಕೂ ಹೆಚ್ಚು ಆಯುಷ್ಮಾನ್‌ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ನಡ್ಡಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.