ADVERTISEMENT

ಸಂಪುಟ ವಿಸ್ತರಣೆ: ಮಹಾರಾಷ್ಟ್ರ ಸಿಎಂ ಶಿಂಧೆ, ಫಡಣವೀಸ್ ಜೊತೆ ಜೆ.ಪಿ. ನಡ್ಡಾ ಸಭೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜುಲೈ 2022, 7:16 IST
Last Updated 9 ಜುಲೈ 2022, 7:16 IST
ಏಕನಾಥ ಶಿಂಧೆ
ಏಕನಾಥ ಶಿಂಧೆ    

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಭೆ ನಡೆಸಿದ್ದಾರೆ.

ಏಕನಾಥ ಶಿಂಧೆ ಮತ್ತು ದೇವೇಂದ್ರ ಫಡಣವೀಸ್ ಅವರು ಇಂದು (ಶನಿವಾರ) ದೆಹಲಿಯ ಜೆ.ಪಿ ನಡ್ಡಾ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

ಸಭೆಯಲ್ಲಿ ಸಂಪುಟ ವಿಸ್ತರಣೆ ಮತ್ತು ಬಿಜೆಪಿ – ಶಿವಸೇನಾ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ವಿಧಾನಸಭೆಯಲ್ಲಿ ಜುಲೈ 4ರಂದು (ಸೋಮವಾರ) ವಿಶ್ವಾಸ ಮತ ಗೆದ್ದಿದ್ದಾರೆ. ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯ ಎದ್ದ ಶಿಂಧೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್‌ 30ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

288 ಸದಸ್ಯ ಬಲದ (ಈಗ 287 ಸದಸ್ಯರು ಇದ್ದಾರೆ) ವಿಧಾನಸಭೆಯಲ್ಲಿ ಶಿಂಧೆ ಅವರ ಪರವಾಗಿ 164 ಮತಗಳು ಚಲಾವಣೆ ಆದವು. ವಿಶ್ವಾಸಮತದ ವಿರುದ್ಧ 99 ಮತಗಳು ಚಲಾವಣೆ ಆಗಿವೆ. ಒಟ್ಟು 263 ಶಾಸಕರು ಮತ ಚಲಾಯಿಸಿದ್ದರು.

ಶಿಂಧೆ ಮತ್ತು ದೇವೇಂದ್ರ ಫಡಣವೀಸ್‌ ನೇತೃತ್ವದ ಸರ್ಕಾರಕ್ಕೆ ಸಿಕ್ಕ ಎರಡನೇ ಮಹತ್ವದ ಗೆಲುವು ಇದು. ಜುಲೈ 3ರಂದು (ಭಾನುವಾರ) ನಡೆದ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಾಹುಲ್‌ ನಾರ್ವೇಕರ್ ಗೆದ್ದಿದ್ದಾರೆ. ರಾಹುಲ್ ಅವರಿಗೆ 164 ಮತಗಳು ಸಿಕ್ಕಿದ್ದವು. ಮಹಾ ವಿಕಾಸ್ ಆಘಾಡಿಯ ಅಭ್ಯರ್ಥಿ ರಾಜನ್‌ ಸಲ್ವಿ ಅವರಿಗೆ 107 ಮತಗಳು ದೊರೆತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.