ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಮುಂದುವರಿಕೆ ಸಾಧ್ಯತೆ

ಪಿಟಿಐ
Published 9 ಅಕ್ಟೋಬರ್ 2022, 14:48 IST
Last Updated 9 ಅಕ್ಟೋಬರ್ 2022, 14:48 IST
ಜೆ.ಪಿ.ನಡ್ಡಾ 
ಜೆ.ಪಿ.ನಡ್ಡಾ    

ನವದೆಹಲಿ: ಜೆ.ಪಿ.ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ 2024ರ ಲೋಕಸಭಾ ಚುನಾವಣೆವರೆಗೂ ಮುಂದುವರಿಸುವ ಸಾಧ್ಯತೆ ಇದೆ.

‘ನಡ್ಡಾ (61) ಅವರ ಮೂರು ವರ್ಷಗಳ ಅಧಿಕಾರಾವಧಿಯು ಮುಂದಿನ ವರ್ಷದ ಜನವರಿಯಲ್ಲಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನವೇ ಬಿಜೆಪಿ ಸಂಸದೀಯ ಮಂಡಳಿಯು ನಡ್ಡಾ ಅವರನ್ನು ಈ ಹುದ್ದೆಯಲ್ಲಿ ಮುಂದುವರಿಸುವ ಕುರಿತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.

‘ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಗೂ ಮುನ್ನ ಕನಿಷ್ಠ ಅರ್ಧದಷ್ಟು ರಾಜ್ಯ ಘಟಕಗಳ ಚುನಾವಣೆ ಮುಕ್ತಾಯಗೊಳ್ಳಬೇಕು ಎಂಬ ನಿಯಮವಿದೆ. ಆದರೆರಾಜ್ಯ ಘಟಕಗಳ ಚುನಾವಣಾ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ಹೀಗಾಗಿ ನಡ್ಡಾ ಅವರ ಮುಂದುವರಿಕೆ ಹಾದಿ ಸುಗಮವಾಗಿದೆ’ ಎಂದು ಹೇಳಿವೆ.

ADVERTISEMENT

2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿಈ ಹಿಂದೆ ಪಕ್ಷದ ಅಧ್ಯಕ್ಷರಾಗಿದ್ದ ಅಮಿತ್‌ ಶಾ ಅವರನ್ನೂ ಈ ಹುದ್ದೆಯಲ್ಲಿ ಮುಂದುವರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.