ADVERTISEMENT

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದ ಜೆ.ಪಿ.ನಡ್ಡಾ

ಏಜೆನ್ಸೀಸ್
Published 12 ಫೆಬ್ರುವರಿ 2020, 10:37 IST
Last Updated 12 ಫೆಬ್ರುವರಿ 2020, 10:37 IST
ಜೆ.ಪಿ.ನಡ್ಡಾ –ಎಎನ್‌ಐ ಚಿತ್ರ
ಜೆ.ಪಿ.ನಡ್ಡಾ –ಎಎನ್‌ಐ ಚಿತ್ರ   

ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಸಂಜೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಯಾವ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ ಎಂಬುದನ್ನು ಪಕ್ಷ ಬಹಿರಂಗಪಡಿಸಿಲ್ಲ.

ದೆಹಲಿ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಬೆನ್ನಲ್ಲೇ ಸಭೆ ಕರೆಯಲಾಗಿದೆ. ದೆಹಲಿ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಆಡಳಿತಾರೂಢ ಎಎಪಿ ಪಕ್ಷ 62 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಬಿಜೆಪಿ ಕೇವಲ 8 ಕ್ಷೇತ್ರಗಳಲ್ಲಷ್ಟೇ ಜಯಗಳಿಸಿತ್ತು.

2015ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 67 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಬಿಜೆಪಿ ಕೇವಲ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.