ಜುಬೀನ್ ಗರ್ಗ್
-ಪಿಟಿಐ ಚಿತ್ರ
ಗುವಾಹಟಿ (ಅಸ್ಸಾಂ): ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆಯ ಭಾಗವಾಗಿ ಅಸ್ಸಾಂನ ಪೊಲೀಸರು ಸಿಂಗಪುರ ತೆರಳಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯದಾದ್ಯಂತ 60ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಾಗಿವೆ. ಸಿಐಡಿ ಎಸ್‌ಐಟಿ ತಂಡ ಪ್ರಸ್ತುತ ಗರ್ಗ್ ಸಾವಿನ ಪ್ರಕರಣವನ್ನು ತನಿಖೆ ನಡೆಸುತ್ತಿದೆ.
ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಮತ್ತು ಟಿಟಾಬೋರ್ ಎಸ್‌ಪಿ ತರುಣ್ ಗೋಯೆಲ್ ಸಿಂಗಪುರ ತೆರಳಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗರ್ಗ್ ಸಾವು ಸಂಭವಿಸಿದ ಸ್ಥಳಕ್ಕೆ ಎಸ್‌ಐಟಿ ತಂಡ ಭೇಟಿ ನೀಡಲಿದ್ದು, ಅಲ್ಲಿನ ಅಧಿಕಾರಿಗಳೊಂದಿಗೆ ಘಟನೆಯ ವಿವರ ಪಡೆಯಲಿದೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ 19 ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.