ಗುವಾಹಟಿ: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದ್ದಾರೆ.
ಸಿಂಗಪುರದಲ್ಲಿ ನಡೆದಿದ್ದ ಈಶಾನ್ಯ ಭಾರತ ಉತ್ಸವದ ಆಯೋಜಕರ ವಿರುದ್ಧ ಅಸ್ಸಾಂನಲ್ಲಿ 60ಕ್ಕೂ ಅಧಿಕ ದೂರುಗಳು ದಾಖಲಾಗಿರುವ ಕಾರಣ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಈ ನಡುವೆ ಎಸ್‌ಐಟಿ ರಚನೆಗೆ ಆದೇಶಿಸಿರುವ ಬಗ್ಗೆ ಬಿಸ್ವ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. ಮಂಗಳವಾರ ಮತ್ತೊಮ್ಮೆ ಮರಣೋತ್ತರ ಮರುಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.