
ಪಿಟಿಐ
ನವದೆಹಲಿ: 2019ರ ಜಾಮಿಯಾ ನಗರ ಹಿಂಸಾಚಾರ ಪ್ರಕರಣದಲ್ಲಿ ವಿದ್ಯಾರ್ಥಿ ಮುಖಂಡರಾದ ಶಾರ್ಜಿಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಹಾಗೂ ಇತರ ಒಂಬತ್ತು ಮಂದಿಯನ್ನು ಈಚೆಗೆ ಬಿಡುಗಡೆಗೊಳಿಸಿದ್ದ ದೆಹಲಿಯ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಅವರು ಇದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
‘ವೈಯಕ್ತಿಕ ಕಾರಣಗಳಿಂದ ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ಇದರ ವಿಚಾರಣೆಯನ್ನು ವರ್ಗಾಯಿಸಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಲ್ಲಿ ಫೆಬ್ರುವರಿ 13ರಂದು ವಿನಂತಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ವೇಳೆ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಹಲವು ವಿದ್ಯಾರ್ಥಿ ಮುಖಂಡರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.