ADVERTISEMENT

ಮಣಿಪುರ | ಜನಾಂಗೀಯ ಹಿಂಸಾಚಾರ : ಬಲಬೀರ್‌ ಸಿಂಗ್‌ ತನಿಖಾ ಸಮಿತಿ ಅಧ್ಯಕ್ಷ

ಪಿಟಿಐ
Published 26 ಫೆಬ್ರುವರಿ 2026, 20:27 IST
Last Updated 26 ಫೆಬ್ರುವರಿ 2026, 20:27 IST
<div class="paragraphs"><p>ಮಣಿಪುರ ಹಿಂಸಾಚಾರ ದೃಶ್ಯ</p></div>

ಮಣಿಪುರ ಹಿಂಸಾಚಾರ ದೃಶ್ಯ

   ಪಿಟಿಐ ಚಿತ್ರ

ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಲಬೀರ್‌ ಸಿಂಗ್‌ ಚೌಹಾಣ್‌ ಅವರನ್ನು, ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ತನಿಖೆ ನಡೆಸುತ್ತಿರುವ ಸಮಿತಿಯ ಅಧ್ಯಕ್ಷರನ್ನಾಗಿ ಕೇಂದ್ರ ಸರ್ಕಾರವು ನೇಮಕ ಮಾಡಿದೆ. 

ಇದೀಗ ಸಮಿತಿಯ ಅಧ್ಯಕ್ಷರಾಗಿರುವ ಗುವಾಹಟಿ ಹೈಕೋ‌ರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಜಯ್‌ ಲಂಬಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಫೆ.28ರಿಂದ ಈ ಅಧ್ಯಕ್ಷ ಸ್ಥಾನ ತೆರವಾಗಲಿತ್ತು. 

ADVERTISEMENT

ಚೌಹಾಣ್‌ ಅವರನ್ನು ಸಮಿತಿಯ ಅ‌ಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಆದೇಶಿಸಲಾಗಿದ್ದು ಮಾ.1ರಂದು ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಗುರುವಾರ ಪ್ರಕಟಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.