ADVERTISEMENT

ಜಸ್ಟಿಸ್ ನಿಲಯ್ ಅಂಜಾರಿಯಾ ಕರ್ನಾಟಕ ಹೈಕೋರ್ಟ್ ಹೊಸ ಸಿಜೆ

ಪ್ರಸ್ತುತ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ನಿಲಯ್ ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.

ಪಿಟಿಐ
Published 16 ಫೆಬ್ರುವರಿ 2024, 14:22 IST
Last Updated 16 ಫೆಬ್ರುವರಿ 2024, 14:22 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ನವದೆಹಲಿ: ಪ್ರಸ್ತುತ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ನಿಲಯ್ ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆ) ನೇಮಿಸಲಾಗಿದೆ.

ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಈ ಮಾಹಿತಿ ನೀಡಿದೆ.

ADVERTISEMENT

ಈ ತಿಂಗಳಾರಂಭದಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿ. ಅಂಜಾರಿಯಾ ಅವರ ಹೆಸರನ್ನು ಸೂಚಿಸಿತ್ತು.

ಪ್ರಸ್ತುತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರುವರಿ 24ಕ್ಕೆ ನಿವೃತ್ತರಾಗಲಿದ್ದಾರೆ.

ನಿಲಯ್ ವಿ. ಅಂಜಾರಿಯಾ ಅವರು 2011 ರಿಂದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.