ADVERTISEMENT

ಸುಪ್ರೀಂ ಕೋರ್ಟ್ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ನೇಮಕ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 6:06 IST
Last Updated 6 ಏಪ್ರಿಲ್ 2021, 6:06 IST
ಎನ್.ವಿ.ರಮಣ
ಎನ್.ವಿ.ರಮಣ   

ನವದೆಹಲಿ: ಸುಪ್ರೀಂ ಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರನ್ನು ನೇಮಕ ಮಾಡುವ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ರಮಣ ಅವರು ಏಪ್ರಿಲ್ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಮುಂದಿನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ರಮಣ ಹೆಸರನ್ನು ಶಿಫಾರಸು ಮಾಡಲಾಗಿತ್ತು.

ADVERTISEMENT

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂ ಗ್ರಾಮದಲ್ಲಿ 1957ರ ಆಗಸ್ಟ್ 27ರಂದು ಜನಿಸಿದ್ದ ರಮಣ ಅವರು 1983ರ ಫೆಬ್ರುವರಿ 10ರಂದು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ್ದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರ ಅಧಿಕಾರಾವಧಿ 2022 ರ ಆಗಸ್ಟ್ 26 ರವರೆಗೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.