ADVERTISEMENT

ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಪ್ರಜ್ಞೆ ತಪ್ಪಿದ ನ್ಯಾಯಮೂರ್ತಿಗಳು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 12:42 IST
Last Updated 14 ಫೆಬ್ರುವರಿ 2020, 12:42 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ನ್ಯಾಯಮೂರ್ತಿ ಆರ್. ಬಾನುಮತಿ ಅವರು ಪ್ರಜ್ಞೆ ತಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಅಪರಾಧಿಗಳ ಪ್ರತ್ಯೇಕ ಮರಣದಂಡನೆ ಕುರಿತಂತೆ ಕೇಂದ್ರ ಸರ್ಕಾರವು ಸಲ್ಲಿಸಿದ್ದ ದಾಖಲೆಗಳ ವಿಚಾರಣೆ ನಡೆಸುವ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು ಕೊಠಡಿಗೆಕರೆದೊಯ್ಯಲಾಗಿದೆ. ಬಳಿಕ ಪೀಠವು ವಿಚಾರಣೆಯನ್ನು ಕೆಲಕಾಲ ಮುಂದೂಡಿ ಆದೇಶವನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ.

ಸಾಲಿಸಿಟರ್‌ ಜನರಲ್ ತುಶಾರ್ ಮೆಹ್ತಾ ಮಾತನಾಡಿ, ನ್ಯಾಯಮೂರ್ತಿ ಆರ್. ಬಾನುಮತಿ ಅವರಿಗೆ ತೀವ್ರವಾದ ಜ್ವರವಿತ್ತು ಮತ್ತು ಈಗಲೂ ಅವರು ಜ್ವರದಿಂದ ಬಳಲುತ್ತಿದ್ದಾರೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದಿದ್ದಾರೆ.

ADVERTISEMENT

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ವೈದ್ಯಕೀಯ ವರದಿಯ ಪ್ರಕಾರ ಅಪರಾಧಿ ವಿನಯ್ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿದ್ದಾನೆ. ಹೀಗಾಗಿ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಕ್ರಮಕ್ಕೆ ಯಾವುದೇ ನ್ಯಾಯಾಂಗ ಪರಿಶೀಲನೆಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.