ADVERTISEMENT

ಎಸ್‌.ಎ ಬೋಬ್ಡೆ ಮುಂದಿನ ಸಿಜೆಐ: ನ.18ರಂದು ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 8:31 IST
Last Updated 29 ಅಕ್ಟೋಬರ್ 2019, 8:31 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಯನ್ನಾಗಿ ನ್ಯಾ. ಶರದ್‌ ಅರಂವಿದಬೋಬ್ಡೆ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನೇಮಕ ಮಾಡಿದ್ದಾರೆ.

ಈಗಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ನವೆಂಬರ್‌ 17ರಂದು ನಿವೃತ್ತರಾಗುತ್ತಿದ್ದಾರೆ. ಅದರ ಮರುದಿನ, ನ. 18ರಂದು ಬೋಬ್ಡೆ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಅದರೊಂದಿಗೆ ಬೋಬ್ಡೆ ಸುಪ್ರೀಂ ಕೋರ್ಟ್‌ನ 47ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಅವರ ಅಧಿಕಾರವಧಿ 2021ರ ಏಪ್ರಿಲ್‌ 23ರ ವರೆಗೆ ಇರಲಿದೆ.

ನ.17ರಂದು ನಿವೃತ್ತರಾಗುತ್ತಿರುವ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ಬೊಬ್ಡೆ ಅವರ ಹೆಸರನ್ನು ಮುಂದಿನ ಮುಖ್ಯನ್ಯಾಯಮೂರ್ತಿ ಹುದ್ದೆಗೆಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು ಎಂದು ಹೇಳಲಾಗಿದೆ.

ADVERTISEMENT

ಎಸ್.ಎ ಬೋಬ್ಡೆ ಅವರು ಮಹಾರಾಷ್ಟ್ರ ಮೂಲದವರು. ಮದ್ರಾಸ್‌ ಹೈಕೋರ್ಟ್‌, ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ. 2013ರಲ್ಲಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.