
ನವದೆಹಲಿ: ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಗುರುವಾರ ನೇಮಕಗೊಂಡಿದ್ದಾರೆ.
ನ. 24ರಂದು ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೆಸರನ್ನು ಸಿಜೆಐ ಬಿ.ಆರ್. ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.
ಈ ಬಗ್ಗೆ ಕೇಂದ್ರ ಕಾನೂನು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಸಿಜೆಐ ಬಿ.ಆರ್. ಗವಾಯಿ ಅವರು ನ.23ರಂದು ನಿವೃತ್ತಿಯಾಗುತ್ತಿದ್ದಾರೆ. 2027ರ ಫೆಬ್ರುವರಿ 9ರವರೆಗೆ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸಿಜೆಐ ಆಗಿ ಮುಂದುವರಿಯಲಿದ್ದಾರೆ. ಹರಿಯಾಣದ ನ್ಯಾಯಮೂರ್ತಿಯೊಬ್ಬರು ಇದೇ ಮೊದಲ ಬಾರಿಗೆ ಸರ್ವೋಚ್ಚ ನ್ಯಾಯಾಲಯದ ಹುದ್ದೆಗೆ ಏರಿದ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ.
ನ್ಯಾ. ಸೂರ್ಯ ಕಾಂತ್ ಪರಿಚಯ
ಹಿಸ್ಸಾರ್ ಜಿಲ್ಲೆಯ ಪೆಟ್ವಾರ್ ಗ್ರಾಮದಲ್ಲಿ 1962ರ ಫೆಬ್ರುವರಿ 10ರಂದು ಜನನ
ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ 1984ರಲ್ಲಿ ಎಲ್‌ಎಲ್‌ಬಿ ಪದವಿ
ಆರಂಭದಲ್ಲಿ ಹಿಸ್ಸಾರ್‌ನ ನ್ಯಾಯಾಲಯದಲ್ಲಿ ವಕೀಲಿಕೆ. ಬಳಿಕ ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ
38ನೇ ವಯಸ್ಸಿನಲ್ಲೇ ಹರಿಯಾಣದ ಅಡ್ವೊಕೇಟ್ ಜನರಲ್ ಆಗಿ ಕಾರ್ಯನಿರ್ವಹಣೆ
42ನೇ ವಯಸ್ಸಿನಲ್ಲಿ ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ. ಅಲ್ಲಿ 14 ವರ್ಷಗಳ ಸೇವೆ
2018ರ ಅಕ್ಟೋಬರ್ 5ರಂದು ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯನ ನ್ಯಾಯಮೂರ್ತಿಯಾಗಿ ಪದೋನ್ನತಿ
2019ರ ಮೇ 4ಕ್ಕೆ ‘ಸುಪ್ರೀಂ’ ನ್ಯಾಯಮೂರ್ತಿಯಾಗಿ ಬಡ್ತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.