ಜಿ.ಆರ್.ಸ್ವಾಮಿನಾಥನ್
ಜಬಲ್ಪುರ: ‘ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ವಿರೋಧ ಪಕ್ಷಗಳು ಮುಂದಾಗಿರುವುದು ‘ರಾಜಕೀಯ ಪ್ರೇರಿತ’ ನಡೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಕೆ.ತ್ರಿವೇದಿ ಆರೋಪಿಸಿದರು.
ಒತ್ತಡ ತಂತ್ರ ಹೇರುವ ಮೂಲಕ ತಮ್ಮ ಪರವಾದ ತೀರ್ಪು ಪ್ರಕಟಿಸಲು ಒತ್ತಾಯಿಸುತ್ತಿವೆ ಎಂದು ಅವರು ದೂರಿದರು.
ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆಯು ಬಾಕಿ ಇರುವಾಗಲೇ ವಿರೋಧ ಪಕ್ಷಗಳ ಈ ನಡೆಯು ತಪ್ಪಾದುದಾಗಿದೆ. ಈ ಮೂಲಕ ವಿಪಕ್ಷಗಳ ಸಂಸದರು, ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಧಕ್ಕೆ ತರುತ್ತಿದ್ದಾರೆ ಮತ್ತು ಸಾರ್ವಜನಿಕರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿದ್ದಾರೆ ಎಂದು ಆರೋಪಿಸಿದರು.
ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಡಿಎಂಕೆ ನೇತೃತ್ವದಲ್ಲಿ ಹಲವು ಸಂಸದರು ಲೋಕಸಭೆ ಸ್ಪೀಕರ್‌ಗೆ ಮಂಗಳವಾರ ನೋಟಿಸ್ ಸಲ್ಲಿಸಿದ್ದಾರೆ.
ಮದುರೈ ಬಳಿಯ ತಿರುಪರನ್‌ಕುಂಡ್ರಂ ಬೆಟ್ಟದ ಮೇಲಿರುವ ಅರುಳ್‌ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅವಕಾಶ ನೀಡಿ ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠದ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ತೀರ್ಪು ನೀಡಿದ್ದರು. ಇದರ ವಿರುದ್ಧ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.