ADVERTISEMENT

ನರೇಂದ್ರ ಮೋದಿ ಭೇಟಿಯಾದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ 

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 6:53 IST
Last Updated 10 ಮಾರ್ಚ್ 2020, 6:53 IST
   

ನವದೆಹಲಿ: ಸರ್ಕಾರದ ವಿರುದ್ಧ ಬಂಡೆದ್ದಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ಮೊದಲಿಗೆ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ನಂತರ ಅವರ ಜೊತೆಯಲ್ಲಿಯೇ ಮೋದಿಯನ್ನು ಭೇಟಿಯಾದರು.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ ಕೆಲ ಸಚಿವರು, ಶಾಸಕರು ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿರುವ ನಡುವೆಯೇ, ಜೋತಿರಾದಿತ್ಯ ಸಿಂಧಿಯಾ ಅವರು ಅಮಿತ್‌ ಶಾ ಮತ್ತು ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಸರ್ಕಾರ ಉಳಿವಿನ ಬಗ್ಗೆ ದೊಡ್ಡ ಅನುಮಾನ ಮೂಡುವಂತೆ ಮಾಡಿದೆ.

ADVERTISEMENT

ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದಾಗಲೇ ಜೋತಿರಾದಿತ್ಯ ಸಿಂಧಿಯಾ ಅವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ, ಹೈಕಮಾಂಡ್‌ ಹಿರಿಯ ನಾಯಕ ಕಮಲನಾಥ್‌ ಅವರಿಗೆ ಮಣೆ ಹಾಕಿತ್ತು. ಇದು ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನ ಮನೆ ಮಾಡುವಂತೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.