ADVERTISEMENT

ಜ್ಯೋತಿರಾದಿತ್ಯ ಸಿಂಧಿಯಾಗೆ ಕೊರೊನಾವೈರಸ್ ಸೋಂಕು; ದೆಹಲಿ ಆಸ್ಪತ್ರೆಗೆ ದಾಖಲು

ಏಜೆನ್ಸೀಸ್
Published 9 ಜೂನ್ 2020, 11:10 IST
Last Updated 9 ಜೂನ್ 2020, 11:10 IST
ಜ್ಯೋತಿರಾದಿತ್ಯ ಸಿಂಧಿಯಾ (ಕೃಪೆ: ಪಿಟಿಐ)
ಜ್ಯೋತಿರಾದಿತ್ಯ ಸಿಂಧಿಯಾ (ಕೃಪೆ: ಪಿಟಿಐ)   

ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಕೊರೊನಾವೈರಸ್ ಸೋಂಕು ಇರುವುದಾಗಿ ದೃಢಪಟ್ಟಿದೆ. ಇವರಿಬ್ಬರು ದಕ್ಷಿಣ ದೆಹಲಿಯ ಸಾಕೇತ್‌ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾವೈರಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿತ್ತು. ಆದರೆ ಅವರ ತಾಯಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ.

ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರಿಗೆ ಕೊರೊನಾಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗುರ್‌ಗಾಂವ್‌ನಲ್ಲಿರುವ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬೀತ್ ಪಾತ್ರಾ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.