ನವದೆಹಲಿ: ಯುವ ನಾಯಕಜ್ಯೋತಿರಾದಿತ್ಯ ಸಿಂಧ್ಯಾ ಅವರು ಭಾನುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ಸಿಂಧ್ಯಾ ರಾಜೀನಾಮೆ ನೀಡಿದ್ದಾರೆ.
ಜನಮತವನ್ನು ಸ್ವೀಕರಿಸಿ, ಸೋಲಿನ ಹೊಣೆ ಹೊತ್ತು ನಾನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಪತ್ರವನ್ನು ರಾಹುಲ್ ಗಾಂಧಿ ಅವರಿಗೆ ಕಳಿಸಲಾಗಿದೆ.
ನನ್ನ ಮೇಲೆ ನಂಬಿಕೆಯಿಟ್ಟು ನನಗೆ ಜವಾಬ್ದಾರಿ ವಹಿಸಿದ ಮತ್ತು ಪಕ್ಷದ ಸೇವೆ ಸಲ್ಲಿಸಲು ಅವಕಾಶ ಕೊಟ್ಟ ರಾಹುಲ್ ಗಾಂಧಿಗೆ ಧನ್ಯವಾದಗಳು ಎಂದು ಸಿಂಧ್ಯಾ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.