ADVERTISEMENT

ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಅಧಿಕಾರ ಸ್ವೀಕಾರ

ಪಿಟಿಐ
Published 9 ಜುಲೈ 2021, 8:14 IST
Last Updated 9 ಜುಲೈ 2021, 8:14 IST
ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂದಿಯಾ(ಬಲಬದಿ) ಅವರು, ಹಿಂದೆ ಈ ಖಾತೆ ನಿರ್ವಹಿಸುತ್ತಿದ್ದ ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂದಿಯಾ(ಬಲಬದಿ) ಅವರು, ಹಿಂದೆ ಈ ಖಾತೆ ನಿರ್ವಹಿಸುತ್ತಿದ್ದ ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಅದೇ ಖಾತೆಯ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ, ನಂತರ ಆ ಪಕ್ಷದ ರಾಜ್ಯಸಭಾ ಸದಸ್ಯರಾದರು. ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ನಾಗರಿಕ ವಿಮಾನಯಾನ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಂಧಿಯಾ ಆ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ADVERTISEMENT

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಜೋತಿರಾದಿತ್ಯ ಸಿಂಧಿಯಾ ಅವರು ದೂರಸಂಪರ್ಕ, ವಾಣಿಜ್ಯ ಮತ್ತು ಕೈಗಾರಿಕೆ, ಇಂಧನ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2020ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ರಾಜಕೀಯ ಸ್ಥಿತ್ಯಂತರಗಳಿಂದಾಗಿ ಜೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.