ADVERTISEMENT

ಪಕ್ಷ ವಿರೋಧಿ ಚಟುವಟಿಕೆ: ಪುತ್ರಿ ಕವಿತಾರನ್ನೇ BRSನಿಂದ ಹೊರಹಾಕಿದ KCR

ಪಿಟಿಐ
Published 2 ಸೆಪ್ಟೆಂಬರ್ 2025, 9:49 IST
Last Updated 2 ಸೆಪ್ಟೆಂಬರ್ 2025, 9:49 IST
<div class="paragraphs"><p>ಕೆ.ಕವಿತಾ</p></div>

ಕೆ.ಕವಿತಾ

   

ಹೈದರಾಬಾದ್‌: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಎಂಎಲ್‌ಸಿ ಕೆ.ಕವಿತಾ ಅವರನ್ನು ಬಿಆರ್‌ಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಅಮಾನತು ಮಾಡಿ ಬಿಆರ್‌ಎಸ್‌ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್‌ (ಕವಿತಾ ಅವರ ತಂದೆ) ಆದೇಶಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ.ರವೀಂದರ್ ರಾವ್‌ ಮತ್ತು ಇನ್ನೊಬ್ಬ ಪ್ರಧಾನ ಕಾರ್ಯದರ್ಶಿ ಸೋಮ ಭರತ್‌ ಕುಮಾರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ADVERTISEMENT

ಕವಿತಾ ಅವರು ಇತ್ತೀಚೆಗೆ ನಡೆದುಕೊಳ್ಳುತ್ತಿರುವ ರೀತಿ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ನೋವುಂಟು ಮಾಡಿದೆ, ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿತರಾಗಿದ್ದ ಕವಿತಾ ಅವರು ಸದ್ಯ ಸುಪ್ರೀಂ ಕೋರ್ಟ್‌ ಮಂಜೂರು ಮಾಡಿದ ಜಾಮೀನಿನ ಮೇಲೆ ಹೊರಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.