ನವದೆಹಲಿ: ಗುಜರಾತಿನಲ್ಲಿರುವ ಕಾಕರಾಪಾರ್ನ ಮೂರನೇ ಹಂತದ ಅಣು ವಿದ್ಯುತ್ ಸ್ಥಾವರದ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ಅವರು,ದೇಶೀಯವಾಗಿ ತಯಾರಾಗಿರುವ ಈ ರಿಯಾಕ್ಟರ್ ‘ಮೇಕ್ ಇನ್ ಇಂಡಿಯಾ’ ಅಭಿಯಾನಕ್ಕೆ ಅದ್ಭುತ ಉದಾಹರಣೆ. ಇದು ಭವಿಷ್ಯದ ಸಾಧನೆಗಳಿಗೆ ಹಾದಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸ್ಥಾವರವು 700 ಮೆಗಾ ವಾಟ್ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯದ್ದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.