ADVERTISEMENT

ಕೃಷಿ ಕಾನೂನುಗಳನ್ನು ಅಗತ್ಯವೆನಿಸಿದರೆ ಮರು ಜಾರಿಗೊಳಿಸಬಹುದು: ಕಲ್‌ರಾಜ್ ಮಿಶ್ರಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ನವೆಂಬರ್ 2021, 5:56 IST
Last Updated 21 ನವೆಂಬರ್ 2021, 5:56 IST
ಕಲ್‌ರಾಜ್ ಮಿಶ್ರಾ (ಪಿಟಿಐ ಚಿತ್ರ)
ಕಲ್‌ರಾಜ್ ಮಿಶ್ರಾ (ಪಿಟಿಐ ಚಿತ್ರ)   

ಭದೋಹಿ (ಉತ್ತರ ಪ್ರದೇಶ): ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್ ಮಿಶ್ರಾ ಸ್ವಾಗತಿಸಿದ್ದಾರೆ.

ಕೃಷಿ ಕಾನೂನುಗಳನ್ನು ಈಗ ರದ್ದುಗೊಳಿಸಬೇಕು ಎಂದು ಸರ್ಕಾರ ಭಾವಿಸಿದೆ. ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ಅವರು ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿತ್ತು. ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ.

ADVERTISEMENT

ರೈತರ ಭಾರಿ ಪ್ರತಿಭಟನೆಯ ಕಾರಣ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಮುಂಬರುವ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.