ADVERTISEMENT

ರಾಹುಲ್‌ ಭೇಟಿ ಮಾಡಿದ ಕಮಲ್‌

45 ನಿಮಿಷ ಮಾತುಕತೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2018, 16:40 IST
Last Updated 20 ಜೂನ್ 2018, 16:40 IST

ನವದೆಹಲಿ: ನಟ ಮತ್ತು ರಾಜಕಾರಣಿ ಕಮಲ್‌ ಹಾಸನ್‌ ಅವರು ಬುಧವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿದರು.

ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಕುರಿತು ಇಬ್ಬರು ನಾಯಕರು ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಇಬ್ಬರು ನಾಯಕರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅವರು ಇದಕ್ಕೂ ಮೊದಲು ತಮ್ಮ ಪಕ್ಷದ ನೋಂದಣಿಗಾಗಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದರು. ‘ನಮ್ಮ ಪಕ್ಷದ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ಕೇಳಿದ ಎಲ್ಲ ಮಾಹಿತಿಗಳನ್ನು ಒದಗಿಸಿದ್ದೇವೆ. ಆಯೋಗವು ಶೀಘ್ರ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ಪಕ್ಷಕ್ಕೆ ಮಾನ್ಯತೆ ನೀಡಲಿದೆ’ ಎಂದು ಕಮಲ್‌ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.