ಕಮಲ್ ಹಾಸನ್
ಬೆಂಗಳೂರು: ‘ಗಾಂಧೀಜಿ ಭಾರತವನ್ನು ವಿದೇಶಿ ದಬ್ಬಾಳಿಕೆಯಿಂದ ಮುಕ್ತಗೊಳಿಸಿದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಭಾರತವನ್ನು ತನ್ನದೇ ಆದ ಪ್ರಾಚೀನ ಸಾಮಾಜಿಕ ಅನ್ಯಾಯದ ಸಂಕೋಲೆಗಳಿಂದ ಮುಕ್ತಗೊಳಿಸಿದರು’ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.
ಅಂಬೇಡ್ಕರ್ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅಂಬೇಡ್ಕರ್ ದೃಷ್ಟಿಕೋನದಲ್ಲಿ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನು ಆ ಮಹಾಪುರಷನ ಪರಂಪರೆಗೆ ಕಳಂಕ ತರುವುದನ್ನು ಸಹಿಸುದಿಲ್ಲ’ ಎಂದಿದ್ದಾರೆ.
‘ಅಂಬೇಡ್ಕರ್ ವಿಚಾರಗಳು ಆಧುನಿಕ ಭಾರತದ ನಿರ್ಮಾಣಕ್ಕೆ ಅಡಿಗಲ್ಲಾಗಿವೆ. ಸಂವಿಧಾನ ಶಿಲ್ಪಿಯ ವಿಚಾರಗಳು ಜನರ ಭಾವನೆಗಳನ್ನು ಕೆರಳಿಸಲು ಉಪಯೋಗಿಸುವ ಬದಲು ಪ್ರಗತಿಗೆ ದಾರಿ ಮಾಡಿಕೊಡಲಿ’ ಎಂದು ಹೇಳಿದ್ದಾರೆ.
‘ಸಂಸತ್ ಭವನದಲ್ಲಿ ಅಂಬೇಡ್ಕರ್ ವಿಚಾರಧಾರೆಗಳನ್ನು ಅರ್ಥಪೂರ್ಣವಾಗಿ ಚರ್ಚಿಸುವ ಮೂಲಕ ಸಂವಿಧಾನ ಅಂಗೀಕರಿಸಿದ 75 ವರ್ಷಗಳನ್ನು ಸ್ಮರಿಸೋಣ’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.