ಭೋಪಾಲ್: ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರೂ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಶಾಸಕರೊಂದಿಗೆ ಚರ್ಚಿಸಲು ಕಮಲನಾಥ್ ಅವರು ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಸಂಪುಟ ಪುನಾರಚನೆಗೆ ಕಮಲನಾಥ್ ಅವರು ನಿರ್ಧಾರಿಸಿದ್ದು, ಜ್ಯೋತಿರಾಧಿತ್ಯ ಸಿಂಧ್ಯ ಬೆಂಬಲಿಗರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೇ ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆಯಲಾಗಿದೆ.
ಸರ್ಕಾರವನ್ನು ಉಳಿಸಿಕೊಳ್ಳುವ ಕೊನೇ ಹಂತದ ಪ್ರಯತ್ನವಾಗಿ ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಮಂತ್ರಿಮಂಡಲದ ಸಚಿವರೂ ರಾಜೀನಾಮೆ ನೀಡಿದ್ದರು.
ಇನ್ನು ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್, ’ ಇದು ಕಾಂಗ್ರೆಸ್‌ನ ಆಂತರಿಕ ವಿಚಾರ. ನಾನು ಮಾತನಾಡಲು ಇಷ್ಟಪಡಲಾರೆ. ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಮೊದಲೇ ಹೇಳಿದ್ದೇವೆ,’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.