ನವದೆಹಲಿ: ‘ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ ‘ಅತಿದೊಡ್ಡ ವಂಚಕರು’ ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. ‘ಭ್ರಷ್ಟ ಆಡಳಿತ’ವನ್ನು ನೀಡುವ ಮೂಲಕ ಇವರು ಜನರ ವಿಶ್ವಾಸಕ್ಕೆ ವಂಚನೆ ಎಸಗಿದ್ದಾರೆ ಎಂದು ಟೀಕಿಸಿದ್ದಾರೆ.
ತಾವು ಗಮನಸೆಳೆದಿದ್ದ ಜನರ ಸಮಸ್ಯೆಗಳಿಗೆ ಪರಿಹಾರ ಸಿಗದಿರುವ ಕಾರಣ ತಾನು ಕಾಂಗ್ರೆಸ್ ಪಕ್ಷವನ್ನು ತೊರೆದುದಾಗಿ ಅವರು ಹೇಳಿದ್ದಾರೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯುತ್ತಿರುವ 23 ಕ್ಷೇತ್ರಗಳಲ್ಲಿಯೂ ಗೆಲ್ಲದಿದ್ದರೂ ಬಿಜೆಪಿ ಸ್ಪಷ್ಟ ಬಹುಮತವನ್ನಂತೂ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಂದರ್ಶನದಲ್ಲಿ ಅವರು ಚುನಾವಣೆ ನಡೆಯುತ್ತಿರುವ 28 ಕ್ಷೇತ್ರಗಳ ಪೈಕಿ 27ರಲ್ಲಿ ಕಾಂಗ್ರೆಸ್ ಗೆದ್ದಿತ್ತು. ಹೀಗಾಗಿ, ಬಿಜೆಪಿ ಎಲ್ಲವನ್ನು ಗಳಿಸಲಿದೆ ಹಾಗೂ ಕಾಂಗ್ರೆಸ್ ಎಲ್ಲವನ್ನು ಕಳೆದುಕೊಳ್ಳಲಿದೆ ಎಂದು ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.