ADVERTISEMENT

ಸೋನಿಯಾಗಾಂಧಿ ಭೇಟಿಯಾದ ಕಮಲ್‌ನಾಥ್

ಪಿಟಿಐ
Published 15 ಜುಲೈ 2021, 12:09 IST
Last Updated 15 ಜುಲೈ 2021, 12:09 IST
ಕಮಲನಾಥ್‌
ಕಮಲನಾಥ್‌   

ನವದೆಹಲಿ (ಪಿಟಿಐ): ಕಾಂಗ್ರೆಸ್‌ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಗುರುವಾರ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದು, ಕುತೂಹಲ ಕೆರಳಿಸಿದೆ.

ಕಾಂಗ್ರೆಸ್‌ ಪಕ್ಷದ ಸಾಂಸ್ಥಿಕ ಸಂಘಟನೆಯ ಪುನರ್‌ರಚನೆಯಲ್ಲಿ ಕಮಲ್‌ನಾಥ್‌ ಅವರಿಗೆ ದೊಡ್ಡ ಜವಾಬ್ದಾರಿ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಈ ಭೇಟಿ ನಡೆದಿದೆ.

ಹಿರಿಯ ನಾಯಕರಾದ ಕಮಲ್‌ನಾಥ್ ಅವರು ಕಾಂಗ್ರೆಸ್‌ನ ಹಿರಿಯ ನಾಯಕರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪಕ್ಷದ ಸಾಂಸ್ಥಿಕ ಸಂಘಟನೆ ಸಮಗ್ರ ಬದಲಾವಣೆಗೆ ಒತ್ತಾಯಿಸಿ ಹೈಕಮಾಂಡ್‌ಗೆ ಪತ್ರ ಬರೆದಿದ್ದ 23 ನಾಯಕರಲ್ಲಿ ಕಮಲ್‌ನಾಥ್ ಒಬ್ಬರು.

ADVERTISEMENT

ಬಿಜೆಪಿಗೆ ಪ್ರಬಲ ಸ್ಪರ್ಧೆ ಒಡ್ಡಲು ಪ್ರತ್ಯೇಕ ರಂಗವನ್ನು ರಚಿಸಲು ಎನ್‌ಸಿಪಿ ಮುಖ್ಯಸ್ಥ ಶರದ್‌ಪವಾರ್ ಅವರು ವಿರೋಧಪಕ್ಷದ ಮುಖಂಡರನ್ನು ಭೇಟಿಯಾಗುತ್ತಿದ್ದ ಸಂದರ್ಭದಲ್ಲಿ ಕಮಲನಾಥ್ ಅವರೂ ಪವಾರ್‌ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.