ADVERTISEMENT

ಮಧ್ಯಪ್ರದೇಶ: ನೂತನ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

ವಿರೋಧ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ

ಏಜೆನ್ಸೀಸ್
Published 17 ಡಿಸೆಂಬರ್ 2018, 9:45 IST
Last Updated 17 ಡಿಸೆಂಬರ್ 2018, 9:45 IST
   

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಮಲನಾಥ್ ಅವರು ಸೋಮವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಪ್ರಮಾಣವಚನ ಬೋಧಿಸಿದರು.

ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷ ನಾಯಕರು:ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೊಟ್ ಅವರ ಪ್ರಮಾಣವಚನ ಕಾರ್ಯಕ್ರಮದಂತೆಯೇ ಮಧ್ಯಪ್ರದೇಶದಲ್ಲೂ ಪ್ರತಿಪಕ್ಷಗಳ ನಾಯಕರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ಮುಖಂಡರಾದ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್,ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲ, ಎಲ್‌‍ಜೆಡಿ ನಾಯಕ ಶರದ್ ಯಾದವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾದರು.

ADVERTISEMENT

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸಹ ಪ್ರಮಾಣವಚ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.