
ಬಂಠಿಡಾ/ಚಂಡೀಗಢ: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ, ನಟಿ ಕಂಗನಾ ರನೌತ್‌ಗೆ ಪಂಜಾಬ್‌ನ ಬಂಠಿಡಾ ನ್ಯಾಯಾಲಯವು ಜಾಮೀನು ನೀಡಿದೆ.
ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್ ಕುರಿತಂತೆ ವಿಷಾದ ವ್ಯಕ್ತಪಡಿಸಿದರು. ಅಲ್ಲದೇ, ಪ್ರತಿಯೊಬ್ಬರ ತಾಯಿ ಕುರಿತು ಗೌರವ ಹೊಂದಿದ್ದೇನೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ಅವರು ವಿಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ನ್ಯಾಯಾಲಯ ಅವಕಾಶ ನೀಡಿರಲಿಲ್ಲ.
ಮಂಗಳವಾರ ನ್ಯಾಯಾಲಯದ ಖುದ್ದು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಲೂ ಗರಿಷ್ಠ ಭದ್ರತೆ ಕೈಗೊಳ್ಳಲಾಗಿತ್ತು.
2020–21ರ ರೈತ ಹೋರಾಟದ ವೇಳೆ ಮಹಿಳಾ ಹೋರಾಟಗಾರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.