ನಟಿ ಕಂಗನಾ ರನೌತ್
(ಪಿಟಿಐ ಸಂಗ್ರಹ ಚಿತ್ರ)
ನವದೆಹಲಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣದ ರದ್ದತಿ ನಿರಾಕರಣೆ ಪ್ರಶ್ನಿಸಿ ಬಿಜೆಪಿ ಸಂಸದೆ, ನಟಿ ಕಂಗನಾ ರನೌತ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 12ರಂದು ವಿಚಾರಣೆ ನಡೆಸಲಿದೆ.
2020–21ರ ರೈತ ಹೋರಾಟದ ವೇಳೆ ಮಹಿಳಾ ಹೋರಾಟಗಾರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ. ಅವರ ವಿರುದ್ಧ ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದೂರಗಢ ಜಂಡಿಯಾನ್ ಗ್ರಾಮದ ಮಹಿಂದರ್ ಕೌರ್ (73) ದೂರು ದಾಖಲಿಸಿದ್ದರು.
ಸಂಸದೆಯು ತನ್ನ ವಿರುದ್ಧ ಆರೋಪಗಳು ಮತ್ತು ಟೀಕೆಗಳನ್ನು ಮಾಡಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.