ಕಂಗನಾ ರನೌತ್
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತಾದ ತಮ್ಮ ಪೋಸ್ಟ್ ಅನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ.
‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ತನ್ನ ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ತಿಳಿಸಿರುವ ಬಗ್ಗೆ ನಾನು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜಿ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ’ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
‘ನನ್ನ ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ನಾನು ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್‌ಸ್ಟಾಗ್ರಾಮ್‌ನಿಂದಲೂ ಡಿಲೀಟ್ ಮಾಡಿದ್ದೇನೆ’ ಎಂದು ರನೌತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.