ಕಂಗನಾ ರನೌತ್
ಚಿತ್ರಕೃಪೆ: ಎಎನ್‌ಐ ಸ್ಕ್ರೀನ್‌ಗ್ರ್ಯಾಬ್
ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಟಿ ಹಾಗೂ ಸಂಸದೆ ಕಂಗನಾ ರನೌತ್ ನೀಡಿದ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿದೆ.
ಭೇಟಿ ವೇಳೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಕಂಗನಾ, ‘ಪರಿಹಾರ ನೀಡಲು ತಮ್ಮ ಬಳಿ ಹಣವಿಲ್ಲ’ ಎಂದಿದ್ದರು.
‘ಪರಿಹಾರ ನೀಡಲು ನನ್ನ ಬಳಿ ಯಾವುದೇ ಹಣವಿಲ್ಲ. ಯಾವುದೇ ಕ್ಯಾಬಿನೆಟ್ ಹುದ್ದೆಯನ್ನು ನಾನು ಹೊಂದಿಲ್ಲ. ಸಂಸದರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ. ಕೇಂದ್ರ ಯೋಜನೆಗಳನ್ನು ತರಲು ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸಂಸತ್ತಿನ ಗಮನಕ್ಕೆ ತರುವುದಕ್ಕಷ್ಟೇ ಅವರು ಸೀಮಿತವಾಗಿದ್ದಾರೆ’ ಎಂದು ಹೇಳಿದ್ದರು.
ಕಂಗನಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಿ’ ಎಂದಿದೆ.
‘ಜನರು ಸಂಕಷ್ಟದಲ್ಲಿರುವಾಗ ಅಪಹಾಸ್ಯ ಮಾಡುವುದು ಸೂಕ್ತವಾದ ನಡೆಯಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.