ADVERTISEMENT

ಬಿಹಾರ ಚುನಾವಣೆ: ಮಹಾಘಟಬಂಧನ ಅಭ್ಯರ್ಥಿಗಳ ಪರ ಕನ್ಹಯ್ಯ, ತೇಜಸ್ವಿ ಪ್ರಚಾರ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 14:37 IST
Last Updated 31 ಆಗಸ್ಟ್ 2020, 14:37 IST
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್   

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್‌ ಅವರು ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಎಡ ಪಕ್ಷಗಳಾದ ಸಿಪಿಐ, ಸಿಪಿಎಂ ಮತ್ತು ಸಿಪಿಐ–ಎಂಎಲ್‌ ಪಕ್ಷಗಳು ವಿರೋಧ ಪಕ್ಷದ ನೇತೃತ್ವದಮಹಾಘಟಬಂಧನದ ಭಾಗವಾಗಲು ತಾತ್ವಿಕವಾಗಿ ಒಪ್ಪಿಗೆ ನೀಡಿವೆ. ಇದರಿಂದ ಎನ್‌ಡಿಎಯೇತರ ಪಕ್ಷಗಳ ಮತಗಳು ವಿಭಜನೆಯಾಗುವುದಿಲ್ಲ ಎಂದೂ ಹೇಳಿವೆ.

‘ಆರ್‌ಜೆಡಿ ನೇತೃತ್ವದ ಮೈತ್ರಿಕೂಟದ ಜೊತೆ ಸೇರಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಕನ್ನಯ್ಯ ಮತ್ತು ತೇಜಸ್ವಿ ಅವರು ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ. ನಮ್ಮೆಲ್ಲರ ಉದ್ದೇಶ ಎನ್‌ಡಿಎಯನ್ನು ಸೋಲಿಸುವುದು’ ಎಂದು ಸಿಪಿಐ ರಾಜ್ಯ ಘಟಕದ ಕಾರ್ಯದರ್ಶಿ ರಾಮ್‌ ನರೇಶ್‌ ಪಾಂಡೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.