ಗಯಾ ಜಿ: ಬಿಹಾರ ಚುನಾವಣೆವರೆಗೂ ನಿತೀಶ್ ಕುಮಾರ್ ಅವರನ್ನು ಬಳಸಿಕೊಂಡು ನಂತರ ಅವರ ಕೈಬಿಡುವುದೇ ಬಿಜೆಪಿಯ ಉದ್ದೇಶ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಮಂಗಳವಾರ ಆರೋಪಿಸಿದರು.
ರಾಜ್ಯದಲ್ಲಿ ಸ್ವಂತ ಬಲದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಹೀಗಾಗಿ ಹಿಂಬಾಗಿಲ ಮೂಲಕ ಸರ್ಕಾರ ರಚಿಸಿ, ನಂತರ ತನ್ನದೇ ಪಕ್ಷದ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವ ಇಚ್ಛೆಯನ್ನು ಅದು ಹೊಂದಿದೆ ಎಂದು ಹೇಳಿದರು.
‘ಮತದಾರನ ಅಧಿಕಾರ ಯಾತ್ರೆ’ ಸಂದರ್ಭದಲ್ಲಿ ‘ಪಿಟಿಐ’ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಚುನಾವಣಾ ಆಯೋಗವು ಬಿಜೆಪಿ ರೀತಿ ಮಾತನಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
‘ಆಡಳಿತ ಪಕ್ಷ ಅಥವಾ ವಿಪಕ್ಷ ಎಂಬ ಭೇದ ಇಲ್ಲ ಎಂದು ಆಯೋಗ ಹೇಳಿದೆ. ಆದರೆ ನಿಜಕ್ಕೂ ಅದು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.
ಚುನಾವಣಾ ಆಯೋಗವು ಜನರ ಮನಸ್ಸಿನಲ್ಲಿ ಸಂದೇಹಗಳನ್ನು ಹುಟ್ಟುಹಾಕಿರುವ ಕಾರಣ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಬಿಕ್ಕಟ್ಟು ಉಂಟಾಗಿದೆ ಎಂದು ತಿಳಿಸಿದರು.
ವಿರೋಧ ಪಕ್ಷಗಳದ್ದೇ ತಪ್ಪು ಎಂದು ಸಾಬೀತು ಮಾಡಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಆಯೋಗ ಯತ್ನಿಸುತ್ತಿದೆಕನ್ಹಯ್ಯ ಕುಮಾರ್ ಕಾಂಗ್ರೆಸ್ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.