ADVERTISEMENT

ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಶೀಘ್ರದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2021, 8:13 IST
Last Updated 17 ಸೆಪ್ಟೆಂಬರ್ 2021, 8:13 IST
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್   

ನವದೆಹಲಿ:ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಮುಖಂಡ ಹಾಗೂ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಬಿಹಾರದಲ್ಲಿ ಕನ್ಹಯ್ಯ ಕುಮಾರ್ ಯುವ ಮುಖಂಡರಾಗಿ ಕಾರ್ಯನಿರ್ವಹಿಸಲಿದ್ದು, ಪಕ್ಷದ ಪ್ರಮುಖ ರಾಷ್ಟ್ರೀಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಿಕಟ ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಕನ್ಹಯ್ಯ ಕುಮಾರ್, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಲವಾರು ಸಂದರ್ಭಗಳಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಕನ್ಹಯ್ಯ ಜವಾಬ್ದಾರಿ ಕುರಿತು ಚರ್ಚೆಗಳು ಅಂತಿಮ ಹಂತದಲ್ಲಿವೆ ಎಂದು ಕನ್ಹಯ್ಯ ಕುಮಾರ್ ಆಪ್ತ ಮೂಲಗಳು ತಿಳಿಸಿವೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಆಂದೋಲನವನ್ನು ಆಯೋಜಿಸುತ್ತಿವೆ. ಇದಕ್ಕಾಗಿ ರಾಹುಲ್ ಗಾಂಧಿ ಯುವ ತಂಡವನ್ನು ಕಟ್ಟುವ ನಿರೀಕ್ಷೆಯಿದೆ.

ಪ್ರಸ್ತುತ ಕನ್ಹಯ್ಯ ಕುಮಾರ್ಸಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.