ADVERTISEMENT

ಉದಯಪುರ: 10 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ

ಪಿಟಿಐ
Published 3 ಜುಲೈ 2022, 10:09 IST
Last Updated 3 ಜುಲೈ 2022, 10:09 IST
ಉದಯಪುರದಲ್ಲಿ ಕರ್ಫ್ಯೂ ಸಡಿಲಿಕೆ
ಉದಯಪುರದಲ್ಲಿ ಕರ್ಫ್ಯೂ ಸಡಿಲಿಕೆ   

ಉದಯಪುರ/ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರ 10 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಯಿತು.

ಹಾಗಿದ್ದರೂ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಮಂಗಳವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದರು. ಇದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ಘಟಿಸಿತ್ತು.

ಈ ಹಿನ್ನೆಲೆಯಲ್ಲಿ ಉದಯಪುರದ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಉದಯಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರದೇಶದಲ್ಲಿ ಶಾಂತಿ ನೆಲೆಗೊಂಡಿದ್ದು, ಕರ್ಫ್ಯೂ ಹೇರಿಕೆ ತೆರವುಗೊಳಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.