ADVERTISEMENT

ಕೇರಳ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್

​ಪ್ರಜಾವಾಣಿ ವಾರ್ತೆ
Published 24 ಮೇ 2021, 9:32 IST
Last Updated 24 ಮೇ 2021, 9:32 IST
ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್
ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್   

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರಕ್ಕೆ ಆಯ್ಕೆಯಾಗಿರುವ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇಂದು(ಸೋಮವಾರ) ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಪ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.

ADVERTISEMENT

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.