ADVERTISEMENT

ತೆರಿಗೆ ವಂಚನೆ: ಕಾನ್ಪುರ ಉದ್ಯಮಿಯಿಂದ ₹280 ಕೋಟಿ ನಗದು, 25 ಕೆ.ಜಿ ಚಿನ್ನ ವಶಕ್ಕೆ

ಪಿಟಿಐ
Published 27 ಡಿಸೆಂಬರ್ 2021, 15:42 IST
Last Updated 27 ಡಿಸೆಂಬರ್ 2021, 15:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾನ್ಪುರ (ಉ.ಪ್ರದೇಶ): ತೆರಿಗೆ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಇಲ್ಲಿನ ಜಿಲ್ಲಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪ್ರಾಸಿಕ್ಯೂಷನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾನ್ಪುರದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್ ಅವರ ನಿವಾಸ ಮತ್ತು ಕನೌಜ್‌ನಲ್ಲಿರುವ ಫಾಕ್ಟರಿ ಮೇಲೆ ದಾಳಿ ನಡೆಸಿದ್ದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಭಾನುವಾರ ಅವರನ್ನು ಬಂಧಿಸಿತ್ತು.

ಅವರ ಬಳಿಯಿಂದ 280 ಕೋಟಿಗೂ ಹೆಚ್ಚು ನಗದು, 25 ಕೆ.ಜಿ. ಚಿನ್ನ ಮತ್ತು 250 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.

ಬಿಗಿ ಭದ್ರತೆಯ ನಡುವೆ ಉದ್ಯಮಿಯನ್ನು ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಬಳಿಕ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಂಟಿ ನಿರ್ದೇಶಕ (ಪ್ರಾಸಿಕ್ಯೂಷನ್) ಸಂಜಯ್ ಕುಮಾರ್ ತ್ರಿಪಾಠಿ ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು, ಜೈನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು. ಕೋವಿಡ್-19 ಪರೀಕ್ಷೆಯನ್ನು ನಡೆಸಲಾಯಿತು ಎಂದವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.