ADVERTISEMENT

ಕಾನ್ಪುರ ಉದ್ಯಮಿ ಸಾವು: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಪಿಟಿಐ
Published 1 ಅಕ್ಟೋಬರ್ 2021, 15:40 IST
Last Updated 1 ಅಕ್ಟೋಬರ್ 2021, 15:40 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಕಾನ್ಪುರದ ಉದ್ಯಮಿಯೊಬ್ಬರು ಪೊಲೀಸ್ ದಾಳಿಯಲ್ಲಿ ಮೃತಪಟ್ಟ ವಿಚಾರವಾಗಿ ಉತ್ತರ ಪ್ರದೇಶದ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಆರೋಪಿ ಪೊಲೀಸರನ್ನು ರಕ್ಷಿಸಲು ಪ್ರಯತ್ನಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಗೋರಖ್‌ಪುರ್ ಹೋಟೆಲ್‌ನಲ್ಲಿ ಉದ್ಯಮಿ ಮನೀಶ್ ಗುಪ್ತಾ ಮೃತಪಟ್ಟಿದ್ದು, ಈ ಸಂಬಂಧ ಅಧಿಕಾರಿಗಳು ಆರು ಪೊಲೀಸರನ್ನು ಅಮಾನತುಗೊಳಿಸಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, 'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯಾವ ರೀತಿಯ ಉತ್ತರಪ್ರದೇಶದ ಚಿತ್ರಣವನ್ನು ಸೃಷ್ಟಿಸಲಾಗುತ್ತಿದೆ. ಒಬ್ಬ ಮುಗ್ಧ ಉದ್ಯಮಿಯ ನಿರ್ದಯ ಹತ್ಯೆಯ ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳು ಎಫ್ಐಆರ್ ದಾಖಲಿಸದಂತೆ ಒತ್ತಡ ಹೇರಿದ್ದರು. ಆರೋಪಿ ಪೊಲೀಸರನ್ನು ರಕ್ಷಿಸಲು ರಾಜ್ಯದ ಅಧಿಕಾರಿಗಳು ಹೇಳಿಕೆಗಳನ್ನು ನೀಡಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ADVERTISEMENT

ಗುಪ್ತಾ ಅವರು ದಾಳಿಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದಾಗಿ ತಲೆಗೆ ಗಾಯವಾಗಿತ್ತು. ಈ ವೇಳೆ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಿಸದೆ ಅವರು ನಿಧನರಾದರು ಎಂದು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.