ADVERTISEMENT

ಯುವತಿ ಜೊತೆ ಸರಸ: ಬೆಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಕನ್ಯಾಕುಮಾರಿಯ ಪಾದ್ರಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮಾರ್ಚ್ 2023, 14:08 IST
Last Updated 20 ಮಾರ್ಚ್ 2023, 14:08 IST
ಬೆನ್ಡಿಕ್ಟ್ ಆಂಟೊ
ಬೆನ್ಡಿಕ್ಟ್ ಆಂಟೊ   

ಚೆನ್ನೈ: ಯುವತಿಯೊಂದಿಗಿನ ಖಾಸಗಿ ಕ್ಷಣಗಳ ಫೋಟೊ–ವಿಡಿಯೊಗಳು ಹರಿದಾಡಿದ ಮೇಲೆ ನಾಪತ್ತೆಯಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್‌ನ 29 ವರ್ಷದ ಯುವ ಪಾದ್ರಿ ಬೆನ್ಡಿಕ್ಟ್ ಆಂಟೊ ಎಂದು ಗುರುತಿಸಲಾಗಿದೆ.

ಬೆನ್ಡಿಕ್ಟ್ ಆಂಟೊ ಲ್ಯಾಪ್‌ಟಾಪ್‌ನಿಂದ ಆಸ್ಟಿನ್ ಎನ್ನುವ ಸ್ನೇಹಿತನೊಬ್ಬ ಅವರ ಖಾಸಗಿ ವಿಡಿಯೊ ಮತ್ತು ಫೋಟೊಗಳನ್ನು ಕದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇಬ್ಬರ ವಿರುದ್ಧ ಸಂತ್ರಸ್ತ ಯುವತಿ ನಾಗರ್‌ಕೋಯಿಲ್‌ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ADVERTISEMENT

ಘಟನೆ ಬೆಳಕಿಗೆ ಬಂದ ಮೇಲೆ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಬೆನ್ಡಿಕ್ಟ್ ಆಂಟೊನನ್ನು ಕನ್ಯಾಕುಮಾರಿ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ಕುರಿತು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಪಾದ್ರಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರ ಬಗ್ಗೆ newsbricks.com ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.