ADVERTISEMENT

ಮ್ಯಾಜಿಸ್ಟ್ರೇಟ್‌ಗಳು ಸಾಕ್ಷ್ಯ ಪರಿಶೀಲಿಸಿದ ನಂತರವೇ ಬಂಧನವಾಗಲಿ: ಕಪಿಲ್‌ ಸಿಬಲ್

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 14:42 IST
Last Updated 28 ಫೆಬ್ರುವರಿ 2026, 14:42 IST
ಕಪಿಲ್ ಸಿಬಲ್
ಕಪಿಲ್ ಸಿಬಲ್   

ನವದೆಹಲಿ: ‘ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಬಿಜೆಪಿಯು ಕಾನೂನನ್ನು ಆಯುಧವಾಗಿಸಿಕೊಳ್ಳುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಆರೋಪಿಸಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸ್ಥಳೀಯ ನ್ಯಾಯಾಲಯವು ಖುಲಾಸೆಗೊಳಿಸಿದ ಬೆನ್ನಲ್ಲೇ, ಅವರು ಈ ಹೇಳಿಕೆ ನೀಡಿದ್ದಾರೆ.

‘ಮ್ಯಾಜಿಸ್ಟ್ರೇಟ್‌ಗೆ ಮಾಖಿಕ ಹಾಗೂ ಸಾಕ್ಷ್ಯಗಳನ್ನು ತೋರಿಸಿದ ನಂತರವೇ ಬಂಧನಕ್ಕೆ ಅವಕಾಶ ನೀಡಲು ಕಾನೂನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು’ ಎಂದು ಈ ವೇಳೆ ಅವರು ಕೋರಿದ್ದಾರೆ.

ADVERTISEMENT

ಸರ್ಕಾರವು ಮೊದಲು ಬಂಧಿಸಿ, ನಂತರ ಸಾಕ್ಷ್ಯಗಳನ್ನು ಕಲೆಹಾಕುವ ವಸಾಹತುಶಾಹಿ ಮನಃಸ್ಥಿತಿಯನ್ನು ಹೊಂದಿದೆ ಎಂದು ಈ ವೇಳೆ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.