ADVERTISEMENT

ಕರ್ನಾಟಕ: ಐದು ವರ್ಷಗಳಲ್ಲಿ 6,137 ರೈತರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 2:19 IST
Last Updated 6 ಆಗಸ್ಟ್ 2022, 2:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದಲ್ಲಿ ಐದು ವರ್ಷಗಳ ಅವಧಿಯಲ್ಲಿ 6,137 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) 2020ರ ವರೆಗೆ ವರದಿ ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (12,462) ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ’ ನಂತರದ ಸ್ಥಾನಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಇವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT