
ಪ್ರಜಾವಾಣಿ ವಾರ್ತೆ
ಚೆನ್ನೈ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ₹ 1,000 ಕೋಟಿ ಹಂಚಿಕೆ ಮಾಡಿರುವುದಕ್ಕೆ ತಮಿಳುನಾಡು ಶನಿವಾರ ಆಕ್ಷೇಪ ವ್ಯಕ್ತಪಡಿಸಿದೆ.
‘ಮೇಕೆದಾಟು ಯೋಜನೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವಾಗ, ಕರ್ನಾಟಕದ ಇಂಥ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು’ ಎಂದು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಟೀಕಿಸಿದ್ದಾರೆ.
‘ಕರ್ನಾಟಕ ವಿಧಾನಸಭೆಗೆ ಮುಂದಿನ ವರ್ಷನಡೆಯಲಿರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಘೋಷಣೆ ಮಾಡಲಾಗಿದೆ. ಆದರೆ, ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವ ಸಲುವಾಗಿ ನಮ್ಮ ಸರ್ಕಾರ ಈ ಯೋಜನೆಯನ್ನು ವಿರೋಧಿಸಲಿದೆ’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.