ADVERTISEMENT

ಸರ್ಕಾರ ಬಂದರೆ ಸಾಕು, ಸಚಿವ ಸ್ಥಾನ ಬೇಡ ಎಂದವರೇ ಸಚಿವರಾಗಿದ್ದಾರೆ: ಯತ್ನಾಳ್‌

ಕೆಲ ಮಂತ್ರಿಗಳು ಸ್ಥಾನ ತೊರೆಯಬೇಕು, ಕಲ್ಯಾಣ ಕರ್ನಾಟಕ ಭಾಗದ ಶಾಸರಿಗೆ ಆದ್ಯತೆ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 11:24 IST
Last Updated 5 ಫೆಬ್ರುವರಿ 2020, 11:24 IST
   

ವಿಜಯಪುರ: ‘ಸಚಿವ ಸಂಪುಟ ವಿಸ್ತರಣೆ ವೇಳೆ ಕಲ್ಯಾಣ ಕರ್ನಾಟಕಕ್ಕೆ ಸಚಿವ ಸ್ಥಾನ ಕೊಡಲೇಬೇಕು ಎಂಬ ಕಲ್ಯಾಣ ಕರ್ನಾಟಕ ನಾಯಕರ ಧ್ವನಿಗೆ ನನ್ನ ಬೆಂಬಲವಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಚಿವ ಸ್ಥಾನ ಹಂಚಿಕೆಯಲ್ಲಿ ಪ್ರಾದೇಶಿಕ ಸಮಾನತೆ ಇರಬೇಕು. ಸಚಿವ ಸ್ಥಾನ ವಂಚಿತ ಜಿಲ್ಲೆಗಳಿಗೂ ಸಚಿವ ಸ್ಥಾನ ಕೊಡಬೇಕು. ಇದನ್ನು ಸರಿದೂಗಿಸಲು ಯಾರು ತ್ಯಾಗ ಮಾಡಬೇಕಿದೆಯೋ ಅವರು ತ್ಯಾಗ ಮಾಡಲಿ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಬೇಕಾದರೆ ಶಾಸಕರಾದ ರಾಜೂಗೌಡ, ದತ್ತಾತ್ರೇಯ ಪಾಟೀಲ ರೇವೂರ ಅವರ ಭಾವನೆಗಳಿಗೆ ಸ್ಪಂದಿಸಬೇಕು’ ಎಂದರು.

‘ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಸಿ.ಪಿ.ಯೋಗೇಶ್ವರ್, ರಮೇಶ ಜಾರಕಿಹೊಳಿ ಸೇರಿ ಎಲ್ಲರ ಪ್ರಯತ್ನ ಇದೆ. ಈ ಹಿಂದೆ ನಡೆದ ಸಭೆಗಳಲ್ಲಿ ಕೆಲವರು ಮುಖ್ಯಮಂತ್ರಿಗೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಬೇಕು, ನಮಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ ಎಂದು ಹೇಳಿದ್ದಾರೆ. ಹಾಗೆ ಹೇಳಿದ ಎಲ್ಲರೂ ಈಗ ಸಚಿವರಾಗಿದ್ದಾರೆ. ಅವರು ತಮ್ಮ ಸಚಿವ ಸ್ಥಾನಗಳನ್ನು ಬಿಟ್ಟುಕೊಡಬೇಕು. ಸರ್ಕಾರ ರಚಿಸಲು ಪ್ರಯತ್ನಿಸಿದವರಿಗೆ ಸಚಿವ ಸ್ಥಾನ ಕೊಟ್ಟರೆ ತಪ್ಪೇನಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.