ADVERTISEMENT

ರಾಹುಲ್ ಇ.ಡಿ ವಿಚಾರಣೆ: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 10:02 IST
Last Updated 21 ಜೂನ್ 2022, 10:02 IST
ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿಯಲ್ಲಿ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿಯಲ್ಲಿ ಪ್ರತಿಭಟನೆ   

ನವದೆಹಲಿ: ಕೇಂದ್ರ ಸರ್ಕಾರವು ಇ.ಡಿ. ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ, ಮುಖಂಡರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಎಲ್. ಹನುಮಂತಯ್ಯ, ಮುಖಂಡರಾದ ನಾಗರಾಜ್ ಛಬ್ಬಿ, ವಿನಯ್ ಕಾರ್ತಿಕ್ ಮತ್ತಿತರರು ಪಾಲ್ಗೊಂಡರು.

ಬಿಜೆಪಿ‌ ದ್ವೇಷದ ರಾಜಕಾರಣ‌ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಶಿವಕುಮಾರ್ ಆರೋಪಿಸಿದರು.

ADVERTISEMENT

ಇವನ್ನೂಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.