ADVERTISEMENT

ರಾಜ್ಯಪಾಲರಾಗಿ ನೇಮಕಗೊಂಡಿರುವ ಗೆಹ್ಲೋಟ್‌ರಿಂದ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2021, 12:01 IST
Last Updated 7 ಜುಲೈ 2021, 12:01 IST
   

ನವದೆಹಲಿ: ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಮಾಜಿ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಸಚಿವಾಲಯವು ಮಾಡಿರುವ ಟ್ವೀಟ್‌ನಲ್ಲಿ ಮೇಲ್ಮನೆಯ ಅಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ಗೆಹ್ಲೋಟ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ.

‘ಗೆಹ್ಲೋಟ್ ಅವರ ರಾಜೀನಾಮೆಯನ್ನು ಉಪರಾಷ್ಟ್ರಪತಿ ಅಂಗೀಕರಿಸಿರುವುದಾಗಿ’ ಸಚಿವಾಲಯ ತಿಳಿಸಿದೆ.

ADVERTISEMENT

ಮಂಗಳವಾರ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು. ಗೆಹ್ಲೋಟ್ ರಾಜ್ಯಸಭಾ ಸದಸ್ಯರು ಸಹ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.