ಮುಂಬೈ: ಕರ್ನಾಟಕದೊಂದಿಗಿನ ಗಡಿ ಸಮಸ್ಯೆ ಪರಿಹರಿಸಲು ಮಹಾರಾಷ್ಟ್ರ ಸರ್ಕಾರ ಉನ್ನತ ಅಧಿಕಾರಿಗಳ ಸಮಿತಿಯನ್ನು ಪುನರ್‌ರಚಿಸಿದೆ.
ಸರ್ಕಾರಿ ನಿರ್ಣಯದ (ಜಿಆರ್) ಪ್ರಕಾರ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ಒಮ್ಮತದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನೇತೃತ್ವದ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಕಾಲಕಾಲಕ್ಕೆ ಹೊಸ ಸರ್ಕಾರಗಳು ಅಧಿಕಾರವಹಿಸಿಕೊಂಡ ಬಳಿಕ ಸಮಿತಿಯನ್ನು ಪುನರ್ ರಚನೆ ಮಾಡಲಾಗುತ್ತದೆ. 2022ರಲ್ಲಿ ಮಹಾಯುತಿ ಮೈತ್ರಿಕೂಟವು ಏಕನಾಥ ಶಿಂಧೆ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದಾಗ ಸಮಿತಿ ಪುನರ್ ರಚನೆ ಮಾಡಲಾಗಿತ್ತು.
ಈಗ, ಹೊಸ ಸರ್ಕಾರ ರಚನೆಯಾದ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನೇತೃತ್ವದಲ್ಲಿ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ. 18 ಸದಸ್ಯರ ಸಮಿತಿ ಇದಾಗಿದೆ. ಇದರಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು, ಮಾಜಿ ಸಿಎಂ ನಾರಾಯಣ ರಾಣೆ, ಶರದ್ ಪವಾರ್ ಮತ್ತು ಪೃಥ್ವಿರಾಜ ಚೌಹಾಣ್ ಸೇರಿ ಹಲವರು ಇರಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.