ADVERTISEMENT

ಅಪ್ರಾಪ್ತ ವಯಸ್ಸಿನ ಬಾಲಕನ ಪ್ರಚೋದನಕಾರಿ ಘೋಷಣೆ: ಪಿಎಫ್‌ಐ ಮುಖಂಡನ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮೇ 2022, 7:25 IST
Last Updated 30 ಮೇ 2022, 7:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಆಯೋಜಿಸಲಾಗಿದ್ದ ರ್‍ಯಾಲಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆಪಾಪ್ಯುಲರ್ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) ಮುಖಂಡನನ್ನು ಬಂಧಿಸಲಾಗಿದೆ.

ಪಿಎಫ್‌ಐ ಸಂಘಟನೆಯ ಬಂಧಿತ ಮುಖಂಡ ಯಾಹ್ಯಾ ತಂಗಳ್ ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರಾಗಿದ್ದಾರೆ.

‘ಗಣರಾಜ್ಯವನ್ನು ಉಳಿಸಿ’ ಎಂಬ ರ್‍ಯಾಲಿಯಲ್ಲಿ ಅಪ್ರಾಪ್ತ ವಯಸ್ಸಿನಬಾಲಕನೊಬ್ಬ ತಂದೆಯ ಹೆಗಲ ಮೇಲೆ ಕುಳಿತು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿರುವ ವಿಡಿಯೊ ವೈರಲ್‌ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಬಾಲಕನ ತಂದೆಯನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಕಾರ್ಯಕ್ರಮದಲ್ಲಿ ಸಂಘಟಕರಲ್ಲಿ ಒಬ್ಬರಾದ ಯಾಹ್ಯಾ ತಂಗಳ್‌ ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಂಗಳ್ ಅವರು ಕೇರಳ ಹೈಕೋರ್ಟ್‌ನ ನ್ಯಾಯಾಧೀಶರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಸ್ವಂತವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದನ್ನು ಹೈಕೋರ್ಟ್‌ ಗಮನಕ್ಕೆ ತರಲಾಗುವುದು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಬಾಲಕನ ವಿವಾದಾತ್ಮಕ ಘೋಷಣೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ತಂಗಳ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.